ಕುಂಕುಮ
₹ 400
ಕುಂಕುಮವನ್ನು ಹಣೆಯ ಮೇಲೆ ಹಚ್ಚಿಕೊಳ್ಳುತ್ತಾರೆ. ಈ ಸ್ಥಳದಲ್ಲಿ ಇಟ್ಟುಕೊಳ್ಳಲು ಕಾರಣವೇನೆಂದರೆ ಯೋಗ(ರಾಜಯೋಗ) ಅಭ್ಯಾಸದಲ್ಲಿ ಮಾನವ ದೇಹ ಏಳು ಶಕ್ತಿ ಕೇಂದ್ರಗಳಾಗಿ ವಿಭಜಿಸಲ್ಪಟ್ಟಿದೆ. ಬೆನ್ನುಮೂಳೆಯ ಮೂಲದಿಂದ (ಬಾಲ) ಪ್ರಾರಂಭವಾಗಿ ತಲೆಯ ತುದಿಯವರೆಗೆ ಹರಡಿದೆ. ಈ ಶಕ್ತಿಕೇಂದ್ರಗಳಲ್ಲಿ ಆರನೆಯ ಚಕ್ರವು (ಹಣೆಯ ಮೇಲಿನ )ಮೂರನೆಯ ಕಣ್ಣು ಎಂದೂ ಹೇಳುವುದುಂಟು. ಇದು ಕಣ್ಣುಗಳ ಹುಬ್ಬುಗಳ ನಡುವೆ ಇರುವ ಬಿಂದು. ಈ ಬಿಂದುವಿನ ಮೂಲಕ ಮಾನವ ಆಧ್ಯಾತ್ಮಿಕವಾಗಿ ದೈವಿಕತೆಗೆ ತೆರೆಯುವ ಸ್ಥಳ ಎಂದೂ ನಂಬಲಾಗಿದೆ.
ಕುಂಕುಮವನ್ನು ಹಿಂದೂ ದೇವತೆಗಳ ಆರಾಧನೆಯಲ್ಲಿ ವಿಪುಲವಾಗಿ ಬಳಸಲಾಗುತ್ತದೆ. ವಿಶೇಷವಾಗಿ ಶಕ್ತಿ ದೇವತೆ ಮತ್ತು ಲಕ್ಷ್ಮಿ ಪೂಜೆಯಲ್ಲಿ ಇದನ್ನು ಬಳಸಲಾಗುತ್ತದೆ.